ಇಂದು ಎಂಬಿಬಿಎಸ್ ವಿದ್ಯಾರ್ಥಿಗಳ ವೈಟ್ ಕೋಟ್ ಸೆರ್ಮನಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಗುಡ್ಡದರಂಗವ್ವನಹಳ್ಳಿಯಲ್ಲಿರುವ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿ ಅ.೩೧ ರ ಇಂದು ಮಧ್ಯಾಹ್ನ ೩ ಗಂಟೆಗೆ ೨೦೨೫-೨೬ ನೇ ಸಾಲಿನ ಪ್ರಥಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳ ವೈಟ್ ಕೋಟ್ ಸೆರ್ಮನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹ್ಸಿನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಆರ್ಥಿಕ ಇಲಾಖೆಯ ಪಿಸ್ಕಲ್ ರಿಫಾರ್ಮ್ಸ್ ಕಾರ್ಯದರ್ಶಿ ಡಾ.ವಿಶಾಲ್ ಆರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಎಸ್, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಬಿ.ಎಲ್.ಸುಜಾತ ರಾಥೋಡ್ ಇವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

- Advertisement - 

ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಬಿ.ವೈ.ಯುವರಾಜ್ ಸಮಾರಂಭದ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಎಸ್.ಪಿ. ರಿಜಿಸ್ಟ್ರಾರ್ ಅಕಾಡೆಮಿ ಸಿ.ಎಂ.ಸಿ.ಆರ್.ಐ. ಡಾ.ಚಂದ್ರಿಕ ಎನ್. ನೋಡಲ್ ಅಧಿಕಾರಿ ಡಾ.ವೇಣು ಆರ್.ಪಿ. ಸಹಾಯಕ ಆಡಳಿತಾಧಿಕಾರಿ ಶಿವುಗಾನಾಯ್ಕ ಲೆಕ್ಕಾಧಿಕಾರಿ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಚಿತ್ರದುರ್ಗ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಬಿ.ವೈ.ಯುವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";