ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮುಂದಕ್ಕೆ ಕೊಂಡೊಯ್ಯುವ, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಹಾಗೂ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿ ಅಧಿಕೃತ ಬಜೆಟ್ ಪೂರಕವಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
19,930 ಕೋಟಿ ಮೊತ್ತದ ಬಜೆಟ್ ಮೂಲಕ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಬೆಂಗಳೂರನ್ನು ಅಭಿವೃದ್ಧಿಯ ಹಾದಿಗೆ ಮರಳಿ ತಂದು, ಜಾಗತಿಕ ಮಟ್ಟದ ಮೂಲಸೌಕರ್ಯ ಒದಗಿಸಲು ಬದ್ಧವಾಗಿದ್ದೇವೆ. ಪಾಲಿಕೆ ಬಜೆಟ್ ಬೆಂಗಳೂರಿನ ಪ್ರಗತಿಯ ನೀಲನಕ್ಷೆಯಾಗಿದೆ.
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಎಲಿವೆಟೆಡ್ ಕಾರಿಡಾರ್, 300 ಕಿ.ಮೀ ಬಫರ್ ವಲಯ ರಸ್ತೆ, ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ವೈಟ್ ಟ್ಯಾಪಿಂಗ್, ಸ್ಕೈ ಡೆಕ್, ನಗರದ ಸೌಂದರ್ಯ ಹೆಚ್ಚಳಕ್ಕೆ ದೀಪಾಲಂಕಾರ ಯೋಜನೆಗಳು ಬೆಂಗಳೂರಿನ ಸ್ವರೂಪ ಬದಲಿಸಲಿವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.