ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತವು ಒಬ್ಬರನ್ನೂ ಬಂಧಿಸಿಲ್ಲ, ಯಾವುದೇ ಆಸ್ತಿಯನ್ನೂ ಮುಟ್ಟುಗೋಲು ಹಾಕಿಲ್ಲ.
ಯಾರ ಮೇಲೂ ಕ್ರಮವನ್ನೂ ಕೈಗೊಂಡಿಲ್ಲ. ಇ.ಡಿ.ಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಲು ಸಾಧ್ಯವಾದರೆ, ಲೋಕಾಯುಕ್ತಕ್ಕೆ ಯಾಕೆ ಸಾಧ್ಯವಾಗಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಮುಡಾ ಹಗರಣವನ್ನು ಲೋಕಾಯುಕ್ತ ತನಿಖೆ ಮುಖಾಂತರ ಮುಚ್ಚಿ ಹಾಕುವ ಪ್ರಯತ್ನವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಪಕ್ಷ ನಾಯಕರು ಆಗ್ರಹ ಮಾಡಿದ್ದಾರೆ.

