ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಪತ್ನಿ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿರುವ ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಕೇಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನ ಹೆಚ್​ಎಸ್​ಆರ್​​ ಲೇಔಟ್​​ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ನಗರದ ಹೆಚ್‌ಎಸ್‌ಆರ್‌ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಹತ್ಯೆಯಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.ಓಂ ಪ್ರಕಾಶ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ದೂರು ನೀಡಿದ್ದರು. ಮೊದಲಿಗೆ ಯಾರನ್ನು ಬಂಧಿಸಿರಲಿಲ್ಲ. ಅವರ ಪತ್ನಿ, ಮಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಇದೀಗ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ಬಂಧಿಸಿಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್​ ಸೇರಿದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡು ಮೂರು ಮೊಬೈಲ್ ಸೀಜ್ ಮಾಡಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಪತ್ನಿ ಪಲ್ಲವಿ, ಮಡಿವಾಳ ಎಸಿಪಿ ವಾಸುದೇವ್ ಮುಂದೆ ಹೇಳಿದ್ದಾರೆ.

ಕೊಲೆಯ ರಹಸ್ಯ- ನಿವೃತ್ತ ಪೊಲೀಸ್ ಅಧಿಕಾರಿ ಪತ್ನಿ ಪಲ್ಲವಿ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೊದಲು ಓಂ ಪ್ರಕಾಶ್ ಮೇಲೆ ಖಾರದ ಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿದಿದ್ದಾರೆ. ಕೈ ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದಾಗಿ ಪಲ್ಲವಿ ಮಾಹಿತಿ ನೀಡಿದ್ದಾರೆ. ಓಂ ಪ್ರಕಾಶ್‌ಗೆ 8-10 ಬಾರಿ ಇರಿಯಲಾಗಿದ್ದು, ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿಯಲಾಗಿದೆ. ಹೊಟ್ಟೆ ಭಾಗಕ್ಕೆ 4-5 ಬಾರಿ ಇರಿದು ಹತ್ಯೆ ಮಾಡಲಾಗಿದೆ.

ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಒದ್ದಾಟ- ಪತ್ನಿಯಿಂದ ದಾಳಿಗೆ ಒಳಗಾದ ಓಂ ಪ್ರಕಾಶ್ ರಕ್ತ ಸಿಕ್ತರಾಗಿದ್ದರು. 15 ರಿಂದ 20 ನಿಮಿಷಗಳ ಕಾಲ ರಕ್ತದ ಮಡುವಿನಲ್ಲೇ ಬಿದ್ದು ಒದ್ದಾಡಿದ್ದಾರೆ. ಆಘಾತಕಾರಿ ವಿಚಾರ ಏನಂದರೆ, ಗಂಡ ನೆಲಕ್ಕೆ ಬಿದ್ದು ನರಳಾಡೋದನ್ನ ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ರಂತೆ. ಓಂ ಪ್ರಕಾಶ್ ಕೊನೆ ಉಸಿರು ಬಿಡೋವರೆಗೂ ಕಾಯುತ್ತಿದ್ದರಂತೆ. ಕೊನೆಗೆ ಪತಿ ಸತ್ತ ಬಳಿಕ ಐಪಿಎಸ್ ಅಧಿಕಾರಿಯೊಬ್ಬರ ಪತ್ನಿ ಹಾಗೂ HSR ಲೇಔಟ್ ಠಾಣೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಹೆಚ್‌ಎಸ್‌ಆರ್‌ಲೇಔಟ್‌ನಲ್ಲಿರು ತಮ್ಮದೇ ನಿವಾಸದಲ್ಲಿ ಓಂ ಪ್ರಕಾಶ್‌ಏ.20ರ ಭಾನುವಾರ ಬರ್ಬರವಾಗಿ ಕೊಲೆ ಆಗಿದ್ದರು. ರಾಜ್ಯದ ಪೊಲೀಸ್ ಇಲಾಖೆಯನ್ನೇ ಮುನ್ನಡೆಸಿದ್ದವರು ಕೊಲೆ ಆಗಿದ್ದಾರೆ ಅನ್ನೋದು ಗೊತ್ತಾಗ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದಿಯಾಗಿ ಇಡೀ ಪೊಲೀಸ್ ಅಧಿಕಾರಿಗಳು ಓಂ ಪ್ರಕಾಶ್‌ನಿವಾಸಕ್ಕೆ ದೌಡಾಯಿಸಿದ್ದರು.

 

 

Share This Article
error: Content is protected !!
";