ತಮ್ಮ ಹೆಸರನ್ನೇ ಪ್ರತಿಷ್ಠಾಪಿಸಿಕೊಳ್ಳಲಿರುವ ಸಿದ್ದರಾಮಯ್ಯಗೆ ನೈತಿಕತೆ ಚುಚ್ಚುವುದಿಲ್ಲವೇ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಸಂಸ್ಥಾನ ಕಟ್ಟಿ ಬೆಳೆಸಿದವರು ಮೈಸೂರಿನ ರಾಜ ಮಹಾರಾಜರು, ಅಂತಹ ಶ್ರೇಷ್ಠ ರಾಜ ಮನೆತನದವರ ಹೆಸರಿರುವ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದೇ ಹೆಸರಿಟ್ಟುಕೊಳ್ಳಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನಪ್ರತಿನಿಧಿಗಳೇ ಇಲ್ಲದ ಮೈಸೂರು ಮಹಾನಗರ ಪಾಲಿಕೆ ಈ ನಿರ್ಧಾರ ತೆಗೆದುಕೊಂಡಿರುವುದು ಎಷ್ಟು ಕ್ರಮಬದ್ಧ ಹಾಗೂ ಎಷ್ಟು ಸಮಂಜಸ?

ತಾವೇ ಅಧಿಕಾರದಲ್ಲಿದ್ದು ತಮ್ಮ ಹೆಸರನ್ನೇ ಪ್ರತಿಷ್ಠಾಪಿಸಿಕೊಳ್ಳಲು ಹೊರಟಿರುವ ಮುಖ್ಯಮಂತ್ರಿಗಳಿಗೆ ನೈತಿಕತೆ ಚುಚ್ಚುವುದಿಲ್ಲವೇ? ತುಘಲಕ್ ಆಡಳಿತ ಅನುಸರಿಸುವವರಲ್ಲಿ ಮಾತ್ರ ಇಂತಹ ನಡೆಯನ್ನು ಕಾಣಲು ಸಾಧ್ಯ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";