ಗೆದ್ದವರು ಹಿಗ್ಗಬೇಕಿಲ್ಲ. ಸೋತವರು ಕುಗ್ಗಬೇಕಿಲ್ಲ-ಶಿವಾನಂದ ತಗಡೂರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

ಚುನಾವಣೆಯಲ್ಲಿ ನೂತನ ಸಾಲಿನ ಆಡಳಿತ ಮಂಡಳಿಗೆ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯ. ಸ್ಪರ್ಧಿಸಿದವರೆಲ್ಲರೂ ಗೆಲ್ಲಲು ಆಗುವುದಿಲ್ಲ. ಹಾಗೆಯೇ ಎಲ್ಲರೂ ಸೋಲಲು ಆಗುವುದಿಲ್ಲ.

- Advertisement - 

ಸ್ಪರ್ಧೆಯಲ್ಲಿ ಸೋಲು-ಗೆಲುವು ಅನಿವಾರ್ಯ. ಗೆದ್ದವರು ಹಿಗ್ಗಬೇಕಿಲ್ಲ. ಸೋತವರು ಕುಗ್ಗಬೇಕಿಲ್ಲ. ಇಂದಿನ ಸೋಲು ಮುಂದೆ ಗೆಲುವಾಗಬಹುದು. ಸಮಾನ ಮನಸ್ಥಿತಿಯಲ್ಲಿ ಎಲ್ಲವನ್ನೂ ಸ್ವೀಕರಿಸುವುದು ಆರೋಗ್ಯಕರ ಲಕ್ಷಣ.

ಎಷ್ಟೇ ಆದರೂ ನಾವೆಲ್ಲರೂ ವೃತ್ತಿಬಾಂಧವರು. ನಾವೆ ಒಪ್ಪಿಕೊಂಡ ಆದರ್ಶಗಳನ್ನು ಪರಿಪಾಲನೆ ಮಾಡುವ ಮೂಲಕ ವೃತ್ತಿ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾಯಕ ಮಾಡೋಣ.

- Advertisement - 

ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಸೊಬಗು. ಮುಂದೆಯೂ ಚುನಾವಣೆ ಬರುತ್ತದೆ. ಸಮಾಧಾನ, ಸಂಯಮ ನಮ್ಮನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುತ್ತದೆ. ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ಗೆಲ್ಲಬಹುದೇ ಹೊರತು ದ್ವೇಷದಿಂದ ಅಲ್ಲ. ಎಲ್ಲರಿಗೂ ಒಳಿತಾಗಲಿ. ಮತ್ತೊಮ್ಮೆ ತಮಗೆಲ್ಲರಿಗೂ ಶುಭಾಶಯಗಳು.

ಚುನಾವಣೆಯನ್ನು ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸಿಕೊಕೊಟ್ಟಿರುವ ಮುಖ್ಯಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರಿಗೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮತ್ತು ಸಹಾಯಕ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

Share This Article
error: Content is protected !!
";