ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಜಿಲ್ಲಾ ಪ್ರವಾಸ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸೆ. 02 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, 10.30 ಗಂಟೆಗೆ ಚಿತ್ರದುರ್ಗ ನಗರದ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸುವರು.  ಬೆ. 11 ಗಂಟೆಗೆ ನಗರದ ಒನಕೆ ಓಬವ್ವ ಸರ್ಕಲ್ನಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡುವರು.  ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು, ಬಳಿಕ ಇಲಾಖೆಯ ವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸುವರು.  ಮಧ್ಯಾಹ್ನ 03.30 ಗಂಟೆಗೆ ಜಿಲ್ಲಾ ಪಂಚಾಯತ್ ಎದುರಿನ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಬಾಲಮಂದಿರಕ್ಕೆ ಭೇಟಿ ನೀಡುವರು.  ಸಂಜೆ 4.30 ಗಂಟೆಗೆ ಕಬೀರಾನಂದ ಆಶ್ರಮ ಕರುವಿನಕಟ್ಟೆ ಸರ್ಕಲ್ ಬಳಿಯ ವೃದ್ಧಾಶ್ರಮಕ್ಕೆ ಭೇಟಿ ನೀಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon