ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಆವರಣದಲ್ಲಿ ಜನವರಿ-17ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಾನ್ನಿಧ್ಯದಲ್ಲಿ ನಡೆದ ಚುಂಚಾದ್ರಿ ಮಹಿಳಾ ಸಮಾವೇಶಕ್ಕೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಿಂದ ಬಸ್ ಮತ್ತು ಕಾರುಗಳಲ್ಲಿ 60ಕ್ಕೂ ಹೆಚ್ಚಿನ ಮಹಿಳೆಯರು ತೆರಳಿದ್ದರು.
ಚಿತ್ರದುರ್ಗ ಜಿಲ್ಲೆಯ ಮಹಿಳಾ ಭಕ್ತಾದಿಗಳು ಆದಿಚುಂಚನಗಿರಿಯಲ್ಲಿ ನಡೆಯುತ್ತಿರುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ. ಈ ಸಮಾವೇಶದಲ್ಲಿ ಮಹಿಳಾ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲೆಯಿಂದ ಆದಿಚುಂಚನಗಿರಿ ಮಠಕ್ಕೆ ಗಾಯಿತ್ರಿ ಮಹೇಶ್, ಕುಸಮಾ, ಹೇಮಲತಾ ವಸಂತ್ ಇವರುಗಳ ನೇತೃತ್ವದಲ್ಲಿ ಬೆಳಿಗ್ಗೆ ಚಿತ್ರದುರ್ಗದಿಂದ ಆದಿಚುಂಚನಗಿರಿಗೆ ತೆರಳಿದರು.
ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರು, ದಂತ ವೈದ್ಯಕೀಯ ಕಾಲೇಜಿನ ಅಧ್ಯಕ್ಷರು ಹಾಗೂ ಬಿಬಿಎಂಪಿ ಡೆಪ್ಯೂಟಿ ಕಮಿಷನರ್ ಬೇತೂರು ಪಾಳ್ಯ ಜೆ.ರಾಜು ಅವರು ಬಸ್ ಮತ್ತು ಕಾರುಗಳನ್ನು ವ್ಯವಸ್ಥೆ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಚುಂಚಾದ್ರಿ ಮಹಿಳಾ ಸಮಾವೇಶಕ್ಕೆ ಜೆ ರಾಜು ಅವರೇ ಸಾರಿಗೆ ವ್ಯವಸ್ಥೆಯ ರೂವಾರಿಗಳಾಗಿದ್ದಾರೆ.
ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಚುಂಚಾದ್ರಿ ಮಹಿಳಾ ಸಮಾವೇಶದ ವೇದಿಕೆಯ ಅಧ್ಯಕ್ಷತೆಯನ್ನು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ವಹಿಸಿದ್ದರು.
ಮಹಿಳೆಯರ ಸಬಲೀಕರಣ ಕುರಿತ ವಿಚಾರಗಳ ಚರ್ಚೆಗಳು ಮುನ್ನೆಲೆಗೆ ಬಂದವು. ಈ ವೇದಿಕೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ, ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಸೌಮ್ಯರೆಡಿ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ ಭಾರತಿ ಶ್ರೀನಿವಾಸ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪುತ್ರಿ, ರಾಷ್ಟ್ರೀಯ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಐಶ್ವರ್ಯ ಡಿಕೆಎಸ್ ಹೆಗ್ಡೆ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಅನುಪಮ ಕೆಂಪಲಿಂಗಯ್ಯ, ಎಐಸಿಸಿ ಸಾಮಾಜಿಕ ಜಾಲತಾಣದ ನಿರ್ದೇಶಕಿ ಭವ್ಯನರಸಿಂಹಮೂರ್ತಿ ಅವರು ಸೇರಿದಂತೆ ಮತ್ತಿತರರ ಸಾಧಕ ಮಹಿಳೆಯರು ಪಾಲ್ಗೊಂಡಿದ್ದರು.