ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹೊರ ತಂದಿರುವ ಕ್ಯಾಲೆಂಡರ್‌ನ್ನು ಬೆಂಗಳೂರು ಕೆಯುಡಬ್ಲೂಜೆ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಾಂಕೇತಿಕವಾಗಿ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಕಾಸರಗೋಡು ಹೊರನಾಡು ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರಿಗೆ ಕ್ಯಾಲೆಂಡರ್‌ಗಳನ್ನು ಹಸ್ತಾಂತರಿಸಿದರು