ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ನಗರದ ಬೊಮ್ಮಸಮುದ್ರ ರಸ್ತೆಯ ಕಿತ್ತೂರು ರಾಣಿ ಚೆನ್ನಮ್ಮ (ಎಸ್.ಟಿ) ಶಾಲೆಯಲ್ಲಿ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಈಚೆಗೆ ರಾಜ್ಯ ಮಟ್ಟದಲ್ಲಿ ವಸತಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮೂರು ವರ್ಷಗಳಿಗೆ ಒಡಂಬಡಿಕೆ ಮಾಡಿಕೊಂಡಿರುವ ಬೆಂಗಳೂರಿನ ಅನಾಹತ ಪೌಂಡೇಶನ್ ವತಿಯಿಂದ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಮಾತನಾಡಿ, ವಸತಿ ಶಾಲೆಗಳ ವಿದ್ಯಾರ್ಥಿಗಳ ದೃಷ್ಟಿಯಿಂದ ಜಿಲ್ಲೆಯ ಎಲ್ಲ ವಸತಿ ಶಾಲೆಗಳ ಪ್ರಾಂಶುಪಾಲರು ಹಾಗೂ ಅನಾಹತ ಪೌಂಡೇಶನ್ ಸಂಸ್ಥೆ ನಡೆಸಿಕೊಡುವ ಕಾರ್ಯಕ್ರಮವನ್ನು ಯಶ್ವಸಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮೂಲಕ ಮಕ್ಕಳ ಬಾಳಿಗೆ ಬೆಳಕಾಗಬೇಕು ಎಂದು ತಿಳಿಸದರು.
ವಸತಿ ಶಾಲೆಗಳ ಜಿಲ್ಲಾ ಸಮನ್ವಯಾಧಿಕಾರಿ ಟಿ. ಮಂಜಣ್ಣ ಮಾತನಾಡಿ, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಾಂಪ್ರದಾಯಕ ಶಿಕ್ಷಣದ ಜೊತೆಗೆ ವೃತ್ತಿ ಶಿಕ್ಷಣ ನೀಡುತ್ತಿರುವ ಕಾರಣ ಚಿಕ್ಕ ವಯಸ್ಸಿಗೆ ದುಡಿಮೆಯ ದಾರಿಗಳನ್ನು ಕಂಡುಕೊಂಡು ತಂದೆ ತಾಯಿಗಳಿಗೆ ಜೀವನದಲ್ಲಿ ಆಸರೆಯಾಗುತ್ತಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಅನಾಹತ ಪೌಂಡೇಶನ್ ಸಂಸ್ಥೆ ವತಿಯಿಂದ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಅವರು ವಸತಿ ಶಾಲೆ ಪ್ರಾಂಶುಪಾಲರಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿದರು.
ಕಾರ್ಯಕ್ರಮದಲ್ಲಿ ವಸತಿ ಶಾಲೆಗಳ ಪ್ರಾಂಶುಪಾಲರಾದ ಆರ್.ರಮೇಶ್, ಸಿದ್ದಪ್ಪ, ಮಹೇಶ್ ಅಂಗಡಿ ಸೇರಿದಂತೆ ಬೆಂಗಳೂರಿನ ಅನಾಹತ ಪೌಂಡೇಶನ್ ಸಂಸ್ಥೆಯ ನಿಂಗಪ್ಪ ಮತ್ತು ಸಿದ್ದಲಿಂಗಪ್ಪ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳು ಇದ್ದರು.