ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಈರುಳ್ಳಿ ಬೀಜೋತ್ಪಾದನಾ ತಾಂತ್ರಿಕತೆ ಕುರಿತ ಕಾರ್ಯಾಗಾರವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಈರುಳ್ಳಿ ಬೀಜೋತ್ಪಾದನೆಯಲ್ಲಿ ಅನುಸರಿಸಬೇಕಾದ ಆಧುನಿಕ ತಾಂತ್ರಿಕ ವಿಧಾನಗಳು, ಗುಣಮಟ್ಟದ ಬೀಜ ಉತ್ಪಾದನೆ, ರೋಗ ಮತ್ತು ಕೀಟ ನಿರ್ವಹಣೆ ಕುರಿತು ತಜ್ಞರಿಂದ ಪ್ರಾಯೋಗಿಕ ಮಾರ್ಗದರ್ಶನ ನೀಡಲಾಗುತ್ತದೆ.
ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ಹೆಚ್ಚಿನ ಮಾಹಿತಿಗಾಗಿ ಡಾ.ರುದ್ರೇಶ್ ಮೊಬೈಲ್ ಸಂಖ್ಯೆ 866001363 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

