ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ, ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ, ಮಾರ್ಚ್ 5 ರಂದು ‘ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ-2023)‘ ಹಾಗೂ ‘ಮಕ್ಕಳ ರಕ್ಷಣೆ ಕಾಯ್ದೆ‘ ಕುರಿತು ಒಂದು ದಿನದ ವಿಶೇಷ ತರಬೇತಿಯನ್ನು ಕಾರ್ಯಾಗಾರ ಆಯೋಜಿಸಲಾಗಿದೆ.
ಮಾ. 05 ರಂದು ಬೆಳಿಗ್ಗೆ 10:30 ಗಂಟೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ.ಕೆ.ಟಿ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್.ಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶೀಲಾ.ಪಿ ಹಾಗೂ
ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗ ಉಪನಿರ್ದೇಶಕ ನಾಸಿರುದ್ದೀನ್ ಭಾಗವಹಿಸಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಡಿ.ವೈ.ಪಿ.ಸಿ ಹನುಮಂತಪ್ಪ ಬಿ.ಎಂ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ವಿಷಯ ಮಂಡನೆ ಮಾಡುವರು. ಕಾರ್ಯಾಗಾರದಲ್ಲಿ ಜಿಲ್ಲೆಯ ಡಿಪೆÇ್ಲಮಾ, ಪಾಲಿಟೆಕ್ನಿಕ್, ಐಟಿಐ ಮತ್ತು ಪ್ಯಾರಾಮೆಡಿಕಲ್ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ.ಎ.ಎಂ ತಿಳಿಸಿದ್ದಾರೆ.

