ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಂಬೂ ಸವಾರಿ ಆರಂಭಕ್ಕೂ ಮುನ್ನ ಸಂಪ್ರದಾಯದಂತೆ ಅರಮನೆಯ ಬಲರಾಮ ದ್ವಾರದಲ್ಲಿ ಶುಭ ಧನುರ್ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು
ಸೇರಿದಂತೆ ಇತರೆ ಗಣ್ಯರು ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಬಳಿಕ ಶುಭ ಕುಂಭ ಲಗ್ನದಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿ ಮೇಲೆ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ನೆರವೇರಿಸಲಾಯಿತು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ಅರಮನೆ ಮುಂಭಾಗ ದಸರಾ ಆನೆ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುವ ವೈಭವದ ಕ್ಷಣಗಳನ್ನು ನೋಡಿ ಲಕ್ಷಾಂತರ ಜನರು ಸಂಭ್ರಮಿಸಿದ್ದಾರೆ.
ಜಂಬೂ ಸವಾರಿ ಜೊತೆಗೆ ಮೆರವಣಿಗೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಸಾಗಿವೆ. ಬೀದರ್ ಕೋಟೆ, ಹಂಪಿ ವಿರೂಪಾಕ್ಷ ದೇಗುಲ, ಗಾಧೀಜಿ ಮತ್ತು ಬಸವಣ್ಣನವರ ಪ್ರತಿಮೆಗಳು ಸೇರಿದಂತೆ ವಿವಿಧ ಟ್ಯಾಬ್ಲೋಗಳು ಪ್ರವಾಸಿಗರ ಮನಸೆಳೆದವು ಎಂದು ಡಿಕೆ ಶಿವಕುಮಾರ್ ಹೇಳಿದರು.

