ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವಪ್ರಸಿದ್ಧ ತಬಲಾ ಮಾಂತ್ರಿಕ ಜಾಕಿರ್‌ಹುಸೇನ್‌ಅವರ ನಿಧನಕ್ಕೆ ತೀವ್ರ ಸಂತಾಪಗಳನ್ನು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ದೇಶದ ಹಲವು ನಾಯಕರು, ಕೇಂದ್ರ ಮತ್ತು ರಾಜ್ಯ ಸಚಿವರುಗಳು, ಶಾಸಕರು, ಮಾಜಿ ಶಾಸಕರು ತಿಳಿಸಿದ್ದಾರೆ.
ತಮ್ಮ ಕೌಶಲ್ಯ ಮತ್ತು ನಾವೀನ್ಯತೆಯಿಂದ ಸಂಗೀತ ಪ್ರಿಯರನ್ನು ಮಂತ್ರಮುಗ್ದಗೊಳಿಸುತ್ತಿದ್ದ , ಸಂಗೀತವನ್ನೇ ಉಸಿರಾಗಿಸಿಕೊಂಡು ಬದುಕಿದ ಕಲಾ ಆರಾದಕರು.
ಪದ್ಮಶ್ರೀ , ಪದ್ಮಭೂಷಣ, ಪದ್ಮವಿಭೂಷಣ ಗೌರವ ಸೇರಿದಂತೆ ನಾಲ್ಕು ಬಾರಿ ಗ್ರ್ಯಾಮಿ ಪ್ರಶಸ್ತಿಗೆ ಭಾಜನರಾಗಿದ್ದ ಸರ್ವಕಾಲಿಕ ಶ್ರೇಷ್ಠ ತಬಲಾ ವಾದಕರಾದ ಜಾಕಿರ್ ಹುಸೇನ್ ಅವರ ಅಗಲಿಕೆ ಸಂಗೀತ ಪ್ರಪಂಚಕ್ಕೆ ತುಂಬಲಾರದ ನಷ್ಟ,
ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕೋರಿದ್ದಾರೆ.