ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವಶ್ರೇಷ್ಠ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಈ ವೇಳೆ ನೀರಜ್ ಚೋಪ್ರಾ ಅವರ ಕ್ರೀಡಾ ಬದುಕು ಮತ್ತಷ್ಟು ಯಶಸ್ಸಿನಿಂದ ಕೂಡಿರಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಆದ ಗೋವಿಂದರಾಜು ಅವರು ಈ ವೇಳೆ ಉಪಸ್ಥಿತರಿದ್ದರು.
ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಸನ್ಮಾನಿಸಿ, ಶುಭ ಹಾರೈಸಿದರು.
ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಭಾಗವಹಿಸಲಿದ್ದಾರೆ.
ಜುಲೈ 5ರಂದು ನಡೆಯಲಿರುವ ಜಾಗತಿಕ ಮಟ್ಟದ ನೀರಜ್ ಚೋಪ್ರಾ ಕ್ಲಾಸಿಕ್ ಸ್ಪರ್ಧೆಗೆ ಕಂಠೀರವ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಕಿಯೋ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ಅವರ ಜೊತೆಗೆ ಅಂತಾರಾಷ್ಟ್ರೀಯ ತಾರೆಗಳಾದ ಜೂಲಿಯಸ್ ಯೆಗೊ ಮತ್ತು ಥಾಮಸ್ ರೋಹ್ಲರ್ ಸ್ಪರ್ಧೆಯ ಪ್ರಧಾನ ಆಕರ್ಷಣೆಯಾಗಿರಲಿದ್ದಾರೆ.
ಸುಮಾರು 10 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಮತ್ತು ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್ ಆಶ್ರಯದಲ್ಲಿ ಈ ಸ್ಪರ್ಧೆ ಮೇ 24ರಂದು ನಡೆಯಬೇಕಾಗಿತ್ತು. ಆದರೆ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷದಿಂದಾಗಿ ಸ್ಪರ್ಧೆ ಮುಂದೂಡಿಕೆ ಆಗಿತ್ತು.