ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ಅಕ್ಟೋಬರ್ 01ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ .ರಾ.ಸು ರಂಗಮಂದಿರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.Aದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್,

ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ.ಬಿ.ಎನ್, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಆರ್.ರಂಗಪ್ಪರೆಡ್ಡಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಸಿ.ಸೋಮಶೇಖರಯ್ಯ ತಿಳಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";