ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಮೆಟ್ರೋ ಈಗ ಭಾರತದಲ್ಲಿ ಅತ್ಯಂತ ದುಬಾರಿಯಾಗಿದ್ದು, ಅನೇಕ ಮಧ್ಯಮ ವರ್ಗದ ಪ್ರಯಾಣಿಕರಿಗೆ ಭರಿಸಲಾಗದಂತಾಗಿದೆ. ಮೆಟ್ರೋ ಟಿಕೆಟ್ ದರ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತ್ತು.
ಟಿಕೆಟ್ ದರ ಹೆಚ್ಚಳ ಹಿನ್ನಲೆಯಲ್ಲಿ ದರ ನಿಗದಿ ಸಮಿತಿ ವರದಿ ಬಹಿರಂಗ ಕೋರಿ ಜನಸಾಮಾನ್ಯರ ಧ್ವನಿಯಾಗಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು ಎಂದು ಬಿಜೆಪಿ ತಿಳಿಸಿದೆ.
ದರ ನಿಗದಿ ಸಮಿತಿ ನೀಡಿದ್ದ ವರದಿ ಬಹಿರಂಗಕ್ಕೆ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದರೂ ಸಮಿತಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಒತ್ತಡದ ಹಿನ್ನೆಲೆಯಲ್ಲಿ ವರದಿ ಬಹಿರಂಗಪಡಿಸಿರಲಿಲ್ಲ. ಹೀಗಾಗಿ ಹೈಕೋರ್ಟ್‌ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ನಡೆಸಿ ಕೋರ್ಟ್ ಬಿಎಂಆರ್‌ಸಿಎಲ್‌ಗೆ ನೋಟಿಸ್ ನೀಡಿದೆ.
ದೆಹಲಿ ಸೇರಿದಂತೆ ದೇಶದ ಪ್ರತಿಯೊಂದು ಇತರ ಮೆಟ್ರೋ ವ್ಯವಸ್ಥೆಯು ತನ್ನ FFC ವರದಿಗಳನ್ನು ಸಾರ್ವಜನಿಕಗೊಳಿಸಿದೆ. ಬೆಂಗಳೂರು ಮೆಟ್ರೋ ಇದಕ್ಕೆ ಹೊರತಾಗಿರುವುದು ಏಕೆ? BMRCL ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರವು ದರ ನಿಗದಿ ಸಮಿತಿ (FFC) ವರದಿಯನ್ನು ರಹಸ್ಯವಾಗಿ ಇಟ್ಟಿದ್ದು ಯಾಕೆ? ಎಂಬ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಎಂದು ಬಿಜೆಪಿ ತಿಳಿಸಿದೆ.