ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ ರವರು ಕುಟುಂಬ ಸಮೇತ ಬಂದು ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯದರ್ಶಿ ಪಿ. ದಿನೇಶ್, ದೇವಾಲಯದ ಪ್ರಧಾನ ಅರ್ಚಕರು ಶ್ರೀನಿಧಿ ಅವರು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಮತ್ತು ದೇವಾಲಯದ ಸಿಬ್ಬಂದಿ ಇದ್ದರು.