ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ-ಯುಗಾದಿ ಹಬ್ಬವು ಹಿಂದೂಗಳಿಗೆ ಹೊಸ ವರ್ಷದ ಆರಂಭವಾಗಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರಾದ ಯಶೋಧಾ ಪ್ರಕಾಶ್ ಅಭಿಪ್ರಾಯಪಟ್ಟರು.
ಶಿವನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು “ಯುಗಾದಿ ಹಬ್ಬದ ಹಿರಿಮೆ-ಗರಿಮೆ”ಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ವಸಂತ ಋತುವಿನಲ್ಲಿ ಬರುವ ಯುಗಾದಿ ಹಬ್ಬವು ಹಿಂದೂಗಳ ಪಾಲಿಗೆ ಪವಿತ್ರ ಪರ್ವವಾಗಿದ್ದು
ಹಬ್ಬದ ಪ್ರಯುಕ್ತ ಆಚರಿಸಲಾಗುವ ಧಾರ್ಮಿಕ ಕಾರ್ಯಗಳ ಹಿಂದೆ ವೈಜ್ಞಾನಿಕ ಮತ್ತು ಆರೋಗ್ಯದ ಒಳಗುಟ್ಟಿದೆ ಎಂದು ತಿಳಿಸಿದರು.ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀಲಲಿತಾ ಸಹಸ್ರನಾಮ ಪಠಣ, ವಿಶೇಷ ಭಜನೆ ಮತ್ತು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮ ನಡೆಯಿತು.
ಈ ಸತ್ಸಂಗ ಸಭೆಯಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಭಾಗ್ಯಲಕ್ಷ್ಮೀ, ರಶ್ಮಿ ರಮೇಶ್, ಮಂಗಳ, ಶಾಂತಮ್ಮ, ಯತೀಶ್ ಎಂ ಸಿದ್ದಾಪುರ, ಮಾಣಿಕ್ಯ ಸತ್ಯನಾರಾಯಣ, ವಿಜಯಲಕ್ಷ್ಮಿ, ಗೀತಾಲಕ್ಷ್ಮೀ, ದ್ರಾಕ್ಷಾಯಣಿ, ವೀರಮ್ಮ,ಕೆ.ಎಸ್ ವೀಣಾ,ಶೈಲಜ, ಕೃಷ್ಣವೇಣಿ, ನಾಗರತ್ನಮ್ಮ, ಶಾರದಮ್ಮ, ಸೌಮ್ಯ, ಭ್ರಮರಂಭಾ ಇದ್ದರು.