ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ಸರ್ಕಾರದಿಂದ ನಡೆಯುವ 2025 -2026 ರ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾದ ಹೊಯ್ಸಳ ಮತ್ತು
ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ದೊಡ್ಡಬಳ್ಳಾಪುರದ ಉದಯೋನ್ಮುಖ ಯೋಗ ಪ್ರತಿಭೆ ನವ್ಯ ಕಲ್ಬರಲ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿಯ ವಿದ್ಯಾರ್ಥಿನಿಯಾದ ಕುಮಾರಿ ಯಶಪ್ರಧ ಎಸ್.ಎಂ ರವರನ್ನು ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಮತ್ತು ₹10,000 ರೂ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಪ್ರಶಸ್ತಿ ಪಡೆದ ವಿದ್ಯಾರ್ಥಿನಿಯನ್ನು ಜನಪ್ರಿಯ ಶಾಸಕರಾದ ಧೀರಜ್ ಮುನಿರಾಜ್ ರವರು, ಕನ್ನಡ ಜಾಗೃತಿ ವೇದಿಕೆಯ ನಾಗರಾಜ ರವರು ಮತ್ತು ಶಶಿಧರ್ ರವರು ಮತ್ತು ಯೋಗ ಶಿಕ್ಷಕಿ ನವ್ಯಶ್ರೀ ಎಂ.ಕೆ ರವರು ಅಭಿನಂದಿಸಿದರು.

