ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹರಿಹರದ ರಾಜನಹಳ್ಳಿ ವಾಲ್ಮೀಕಿ ಜಾತ್ರೆ ಕಾರ್ಯಕ್ರಮಕ್ಕೆ ಹೋಗುವ ಮಾರ್ಗ ಮಧ್ಯೆ ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ರವರು ಹಿರಿಯೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹೆದ್ದಾರಿ ರಸ್ತೆಯಲ್ಲಿ ಅದ್ಧೂರಿ ಸ್ವಾಗತ ಕೋರಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಯತೀಂದ್ರ ಅವರು ಕಾರ್ಯಕರ್ತರು ಜಿಲ್ಲಾ ಪಂಚಾಯತ್ ತಾಲೂಕ್ ಪಂಚಾಯತ್ ಚುನಾವಣೆಗೆ ಒಗ್ಗಟಾಗಿ ಕೆಲಸ ಮಾಡಬೇಕು. ಸರ್ಕಾರ ನೀಡಿರುವ ಐದು ಗ್ಯಾರಂಟಿಗಳ ಬಗ್ಗೆ ಮತದಾರರಿಗೆ ಮನವರಕೆ ಮಾಡಿ ಕೊಡುವುದರ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲಿವಿಗೆ ಶ್ರಮಿಸ ಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಜ್ಜಪ್ಪ, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶಬಾಬು, ಎಸ್ಸಿ ಸೆಲ್ ಅಧ್ಯಕ್ಷ ಜೆಎಲ್ ಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್, ಕಲ್ಲಹಟ್ಟಿ ಹರೀಶ್, ಗಿಡ್ಡೋಬನಹಳ್ಳಿ ಅಶೋಕ್, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ಸಲ್ಮಾನ್, ಗುಳ್ಯ ಅನಿಲ್, ಬಾಲರಾಜ್, ಉಡುವಳ್ಳಿ ಶಮ್ಮು, ಬ್ಯಾಡರಹಳ್ಳಿ ಮಂಜಣ್ಣ, ನಂದಿಹಳ್ಳಿ ನಾಗರಾಜ್, ರಂಗಸ್ವಾಮಿ, ಪಾಂಡು, ತಿಪ್ಪೇಶ್, ಶರತ್, ಮುದ್ದುರಾಜ ಮುಂತಾದವರು ಉಪಸ್ಥಿತರಿದ್ದರು.