ಧಾರ್ಮಿಕ ಧರ್ಮ ಜಾಗೃತಿ ಮತ್ತು ಸಾಮರಸ್ಯದ  ಬದುಕಿಗೆ ಸಹಕಾರಿ: ಯತೀಶ್ ಎಂ ಸಿದ್ದಾಪುರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀಕ್ಷೇತ್ರ ಧರ್ಮ ಗ್ರಾಮಾಭಿವೃದ್ಧಿ ಯೋಜನೆಯ ಧಾರ್ಮಿಕ ಕಾರ್ಯಕ್ರಮಗಳು ಸಾಮರಸ್ಯದ ಬದುಕು ಮತ್ತು ಧರ್ಮಜಾಗೃತಿ ಮೂಡಿಸುವಲ್ಲಿ ಅತ್ಯಂತ ಸಹಕಾರಿಯಾಗಿವೆ ಎಂದು ಚಳ್ಳಕೆರೆ ಶ್ರೀಶಾರದಾಶ್ರಮದ ಸ್ವಯಂಸೇವಕ ಯತೀಶ್ ಎಂ ಸಿದ್ದಾಪುರ ತಿಳಿಸಿದರು.

ತಾಲೂಕಿನ ದುರ್ಗಾವರದ ಶ್ರೀಲಕ್ಷ್ಮೀ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಾಯಕನಹಟ್ಟಿ ಇದರ ಸಹಯೋಗದಲ್ಲಿ ಆಯೋಜಿಸಿದ್ದ “ಶ್ರೀಲಕ್ಷ್ಮೀ ಪೂಜೆ, ಶ್ರೀಲಕ್ಷ್ಮೀ ರಂಗನಾಥಸ್ವಾಮಿಗೆ ಎಲೆ ಪೂಜೆ ಹಾಗೂ ಧಾರ್ಮಿಕ ಸಭಾ” ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ವಿಶೇಷ ಉಪನ್ಯಾಸ ನೀಡಿದರು‌.

- Advertisement - 

ಧಾರ್ಮಿಕ ಸಭೆಗಳು ಜನರಲ್ಲಿ ಸಂಘಟನೆ, ಶ್ರದ್ಧೆ,ದೇವರಲ್ಲಿ ಭಕ್ತಿಯನ್ನು ಬೆಳೆಸುತ್ತವೆ ಎಂದರು.
ಚಳ್ಳಕೆರೆಯ ಖ್ಯಾತ ವಕೀಲ ಕೆ.ಎಂ.ನಾಗರಾಜ್ ಮಾತನಾಡಿ ಸ್ವ ಸಹಾಯ ಸಂಘಗಳು ಸದಸ್ಯರಿಗೆ ಕಡಿಮೆ ದರದಲ್ಲಿ ಸಾಲ ನೀಡುವುದರ ಜೊತೆಗೆ ಸ್ನೇಹ, ಸಾಮರಸ್ಯ, ಭ್ರಾತೃತ್ವದ ಭಾವನೆಗಳನ್ನು ಬೆಳೆಸುತ್ತವೆ. ಸಂಘದ ಸದಸ್ಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಕಡೆಗೆ ಗಮನ ಕೊಡಬೇಕು ಎಂದು ಸಲಹೆ ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಅವರು ಸಂಘದ ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಜಯಂತ್, ಗಿರಿಜಾ, ಗಿಡ್ಡ ರಂಗಪ್ಪ, ತಿಪ್ಪೇಸ್ವಾಮಿ, ಶಿವಣ್ಣ ಸೇರಿದಂತೆ ವಿವಿಧ ಗಣ್ಯರು, ಸಂಘದ ಮಹಿಳಾ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";