ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚನ್ನಪಟ್ಟಣ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಅವರ ಹೆಸರು ಘೋಷಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಜೆಡಿಎಸ್ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ,ಪ್ರತಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ, ಶಾಸಕರು, ಸಂಸದರು, ಮಾಜಿ ಸಚಿವರು ಮತ್ತು ಪ್ರಮುಖರು ಉಪಸ್ಥಿತರಿದ್ದರು.