ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಎತ್ತಿನಹೊಳೆ ಯೋಜನೆ-ದೇವೇಗೌಡರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡರು ಸೋಮವಾರ ಆಮೆಗತಿಯಲ್ಲಿ ಸಾಗುತ್ತಿರುವ ಎತ್ತಿನಹೊಳೆ ಯೋಜನೆ ಕುರಿತು ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದರು.

ಬಜೆಟ್‌ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ದೇವೇಗೌಡರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಕಿಡಿಕಾರಿದರು.

- Advertisement - 

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿಗೆ ಪ್ರತಿ ದಿನ ಜನರು ಬಲಿಯಾಗುತ್ತಿದ್ದಾರೆ. ರೈತರು ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸುತ್ತಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಕೊಳಚೆ ನೀರನ್ನು 3 ಹಂತಗಳಲ್ಲಿ ಶುದ್ಧೀಕರಿಸದೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಹರಿಸುತ್ತಿದೆ. ಇದರ ಪರಿಣಾಮ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿ ಆಗುತ್ತಿದ್ದು, ಜನರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಸದನಕ್ಕೆ ದೇವೇಗೌಡರು ಮನವರಿಕೆ ಮಾಡಿಕೊಟ್ಟರು.

- Advertisement - 

 

Share This Article
error: Content is protected !!
";