ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇಗವಾಗಿ ಬಂದ ಬೈಕ್ ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿಯಾದ ಪರಿಣಾಮ ಯೋಗೇಶ್ವರಿ(26) ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರದ ಖಾಸಗಿ ಬ್ಯಾಂಕ್ ಹೋಮ್ ಲೋನ್ ವಿಭಾಗದಲ್ಲಿ ಉದ್ಯೋಗಿಯಾಗಿದ್ದ ಮೃತ ದುರ್ದೈವಿ ಯೋಗೇಶ್ವರಿ. ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಘಟನೆಗೆ ಬಗ್ಗೆ ತನಿಖೆ ನಡೆಯುತ್ತಿದೆ.

