ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಏಳುಕೋಟಿ ಕನ್ನಡಿಗರು ನಮ್ಮ ಮೇಲೆ ಭರವಸೆಯನ್ನಿಟ್ಟು ಮತನೀಡಿ, ಆಶೀರ್ವದಿಸಿ ಭರ್ಜರಿ ಬಹುಮತದ ಮೂಲಕ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟು ಮೇ 20ಕ್ಕೆ ಎರಡು ವರ್ಷ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಸಾಮಾಜಿಕ ನ್ಯಾಯದ ಬಂಡಿಯನ್ನು ಸಮಾನವಾಗಿ ಮುನ್ನಡೆಸಿ ನಾಡನ್ನು “ಸರ್ವಜನಾಂಗದ ಶಾಂತಿಯ ತೋಟ”ವಾಗಿಸುವತ್ತ ಪ್ರಾಮಾಣಿಕವಾಗಿ ಶ್ರಮಿಸಿದ ಸಂತೃಪ್ತಿ ನಮ್ಮದು. ಸಾಧಿಸಿದ್ದು ಒಂದಷ್ಟಾದರೆ, ಸಾಧಿಸಬೇಕಿರುವುದು ಬಹಳಷ್ಟಿದೆ ಎಂಬುದರ ಅರಿವು ನಮಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ನಿಮ್ಮ ಸಹಕಾರ ಎಂದಿನಂತೆ ನಮ್ಮೊಂದಿಗಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.