ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ವತಿಯಿಂದ ಯಾದಗಿರಿ ನಗರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ಪರವಾಗಿ ಕಥಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಯುವ ಬರಹಗಾರರಾದ ಹಣಮಂತ ಕಾಂಬಳೆ ಅವರು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
“ನಂಬಿಕೆ ಮಾರಾಟಕ್ಕಿದೆ” ಎಂಬ ಶೀರ್ಷಿಕೆಯ ಅವರ ಕಥೆಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದ್ದು, 2026 ರ ಜನವರಿ ಮೊದಲ ವಾರದಲ್ಲಿ ನವದೆಹಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಯುವಜನೋತ್ಸವದಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಜಿಲ್ಲೆಗೆ ಕೀರ್ತಿ ತಂದ ಯುವ ಬರಹಗಾರ ಹಣಮಂತ ಕಾಂಬಳೆ ಅವರಿಗೆ ಜಿಲ್ಲಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅಭಿನಂದಿಸಿದ್ದಾರೆ.

