ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ ಆಡಳಿತದಿಂದ ಗ್ರಾಮೀಣ ಮಕ್ಕಳ ಭವಿಷ್ಯ ಬೆಳಗುವ ಆಲಯಗಳಾದ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ದುರಂತದ ದೌರ್ಭಾಗ್ಯವೇ ಸರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಬಡ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಹಾಕಿಕೊಂಡಿರುವ ಕಾರ್ಯಕ್ರಮವೇನು? ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಿಡುಗಡೆ ಮಾಡಿರುವ ಅನುದಾನವೆಷ್ಟು? ನಿತ್ಯವೂ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಶಾಲಾ ಕಟ್ಟಡಗಳ ದುಸ್ಥಿತಿಯ ವರದಿಗಳು ಭಂಡ ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ ಎಂದು ವಿಜಯೇಂದ್ರ ದೂರಿದ್ದಾರೆ.
ಬಡ ಮಕ್ಕಳ ಶಿಕ್ಷಣವನ್ನು ಸಂಪೂರ್ಣವಾಗಿ ಮರೆತಿರುವ ಜನವಿರೋಧಿ ಸರ್ಕಾರದ ಆಡಳಿತದಲ್ಲಿ ಸರ್ಕಾರಿ ಶಾಲೆಗಳ ಪರಿಸ್ಥಿತಿ ಹದಗೆಟ್ಟಿದೆ. ಇನ್ನಾದರೂ ಸರ್ಕಾರಿ ಶಾಲೆಗಳ ಉಳಿವಿಗಾಗಿ ಸಮಗ್ರ ಯೋಜನೆ ರೂಪಿಸಿ ಬಡವರ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿರುವ ಸರ್ಕಾರಿ ಶಾಲೆಗಳನ್ನು ಉಳಿಸುವತ್ತ ಕಾರ್ಯಪ್ರವೃತ್ತವಾಗಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.