ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೀಪಾವಳಿ ಹಬ್ಬದ ಪ್ರಯುಕ್ತ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಅಕ್ಟೋಬರ್ 21, 2025 ರಂದು (ಮಂಗಳವಾರ)
ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನ್ನು ತೆರೆದಿರಲಾಗುವುದು ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯ, ಮೈಸೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

